ಬನ್ನಿ ಮನೆಗೆ ಹೋಗೋಣ. . . Lets Go Home !

ಬಡತನ ಮತ್ತು ಒಳ್ಳೆಯ ವಿದ್ಯಾಭ್ಯಾಸ ಸಿಗುತ್ತದೆ ಎನ್ನುವ ಕಾರಣಗಳನ್ನು ನೀಡಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ತಾಯ್ತಂದೆಯರು ತಮ್ಮ ಮಕ್ಕಳನ್ನು ಬೆಂಗಳೂರಿನ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ, NGOಗಳಲ್ಲಿ ದಾಖಲಿಸಿರುತ್ತಾರೆ. ಈ ಕಾರಣಗಳು ಒಂದು ಹಂತದವರೆಗೂ ನಿಜವೇ ಆದರೂ ಹೀಗೆ ಮಕ್ಕಳನ್ನು ದೂರ ಮಾಡಿರುವ ತಂದೆ ತಾಯಿಯರಲ್ಲಿ ತಮ್ಮ ಜವಾಬ್ದಾರಿಯನ್ನು ವರ್ಗಾವಣೆ ಮಾಡುವ ಮನೋಭಾವವೇ ಎದ್ದು ಕಾಣುತ್ತದೆ. ಅವರುಗಳ ಉಡಾಫೆತನವನ್ನು ವ್ಯಾಪಾರೀಕರಣಗೊಳಿಸಿ, ಸಮಾಜ ಸೇವೆ ಎನ್ನುವ ಹೆಸರಿನಲ್ಲಿ ನಾಯಿಕೊಡೆಗಳಂತೆ ಬೆಂಗಳೂರಿನ ಪ್ರತೀ ಗಲ್ಲಿಯಲ್ಲೂ ’ಸೇವಾಶ್ರಮ’ ಎನ್ನುವ ಬೋರ್ಡ್ ಕಾಣುತ್ತದೆ. ಬಹಳಷ್ಟು ಸಂಸ್ಥೆಗಳಿಗೆ ಸರಿಯಾದ ನೋಂದಾವಣೆ ಇರುವುದಿಲ್ಲ. ಯಾವ ಬಡತನ ಎನ್ನುವ ಕಾರಣಕ್ಕೆ ಮಕ್ಕಳು ಸುಖವಾಗಿರಲು ಇಲ್ಲಿನ ಸಂಸ್ಥೆಗೆ ಬಂದಿರುತ್ತಾರೋ , ವಾಸ್ತವದಲ್ಲಿ ಇಲ್ಲಿ ಇನ್ನೂ ಹಾಳಾದ ಪರಿಸರದಲ್ಲಿ ಇರುತ್ತಾರೆ. ಮಾನಸಿಕ ಆರೋಗ್ಯವೂ ಕುಂದಿರುತ್ತದೆ. Inferiority complexನ ಬಲಿ ಪಶುಗಳಾಗಿರುತ್ತಾರೆ. ಭವಿಷ್ಯದೆಡೆಗೆ ನಿರ್ವಿಣ್ಣರಾಗಿರುತ್ತಾರೆ. ಸಂಸ್ಥೆಗಳು ಅವರಲ್ಲಿನ ಹೆಣ್ಣು ಮಕ್ಕಳನ್ನು ಬ್ಯೂಟಿ ಪಾರ್ಲರ್‍ನ ಕೆಲಸಕ್ಕೆ ಹೊರತಾದ ಯಾವುದೇ ಕೌಶಲ್ಯ ಕಲಿಸಲು ಸೋಲುತ್ತಿವೆ. ಅಬ್ಬಬ್ಬಾ ಎಂದರೆ ಮಕ್ಕಳು ನಾಲ್ಕು ಚೂಡಿದಾರ್ ಹೊಲಿಯುವಷ್ಟು ಟೈಲರ್ ಆಗುತ್ತಿದ್ದಾರೆ ಅಷ್ಟೇ. ಇಲ್ಲಿರುವ ಬಾಲಕಿಯರದ್ದೂ , ಅದೆಷ್ಟೋ ಕುಟುಂಬದ ಜೊತೆಯಲ್ಲಿ ಇರುವ ಹೆಣ್ಣು ಮಕ್ಕ...