Posts
Showing posts from November, 2020
ಮಕ್ಕಳ ಹಕ್ಕು, ಮೊದಲ ಹುಡುಗ
- Get link
- X
- Other Apps

ಈ ಸಂಪರ್ಕ ಸಂಖ್ಯೆಯೊಡನೆ ಮಾತು ನಿಂತು ಮೂರು ತಿಂಗಳಾಗಿತ್ತೇ?! ಗಮನಕ್ಕೇ ಬರಲಿಲ್ಲವಲ್ಲ. ಎಂದುಕೊಳ್ಳುತ್ತಲೇ ಬಂದಿದ್ದ ಆಡಿಯೋ ಸಂದೇಶವನ್ನು ತೆರೆದೆ “ ಲೇ ಲೇ ರಾಮಣ್ಣನ ಮಗಳೇ. . .” ಎಂದು ರಾಗವಾಗಿ ಹಾಡಿದ್ದ ಅವನು. ಆ ರಾಗಕ್ಕೆ ತಾಳವಾಗುವ ಮನಸ್ಸು ಇರಲಿಲ್ಲ. ಆದರೆ ಉತ್ತರಿಸುವುದು ಬೇಕಾಗಿತ್ತು. ಪ್ರಾಮಾಣಿಕವಾಗಿ ಹೇಳಿದೆ “ ಪಾಪ ಆ ಹುಡುಗಿ ಹತ್ತಿರ ಸೆಕ್ಶನ್ 94ರಲ್ಲಿ ಹೇಳಿರುವ ಯಾವ ದಾಖಲೆಯೂ ಇಲ್ಲ. ಏನು ಮಾಡೋದು ಅಂತ ಯೋಚಿಸ್ತಿದ್ದೀನಿ” ಎಂದೆ. ಪ್ರತಿ ಬಾರಿಯಂತೆ ಈಗ ಅವನು ಸಿಡುಕಲಿಲ್ಲ. “ನೀನೊಂದು ಗೂಬೆ’ ಎಂದು ದೂರಲಿಲ್ಲ. “ನಿನ್ನಿಂದ ರೊಮ್ಯಾಂಟಿಕ್ ಮಾತು impossible” ಎಂದು ಬೈಯಲಿಲ್ಲ. ಸಮಾಧಾನದಿಂದ “ಓಹ್ ಹೌದಾ. . .” ಎನ್ನುತ್ತಲೇ ಒಂದೆರಡು ಸಲಹೆಗಳನ್ನು ಕೊಟ್ಟ. ಸಲೀಂ ನನ್ನ ಜೀವದ ಅವಿಭಾಜ್ಯ ಅಂಗ. ಜೀವನವನ್ನು ಹಂಚಿಕೊಂಡವ. ಅಮೇರಿಕೆಯಲ್ಲಿ ಇದ್ದಾನೆ. ನಮ್ಮಿಬ್ಬರದು ಹುಟ್ಟಿದಾರಭ್ಯ ಏತಿ ಎಂದರೆ ಪ್ರೇತಿ ಎನ್ನುವ ಬಂಧ. ನನ್ನ ಯಾವ ಗುರಿಗಳೂ ಅವನದಲ್ಲ. ಅವನ ಯಾವ ಕನಸುಗಳೂ ನನ್ನನ್ನು ರೋಮಾಂಚನ ಗೊಳಿಸಿದ್ದೇ ಇಲ್ಲ. ಕಲ್ಪನೆಗಳನ್ನೂ ನಮ್ಮಿಬ್ಬರ ಸಾಮ್ಯತೆಯೇ ಇಲ್ಲ. ಅವನದ್ದು ಬೆಳಗ್ಗೆ ಒಂಭತ್ತರಿಂದ ಸಂಜೆ ಐದಕ್ಕೆ ನಿಗಧಿಗೊಂಡ ಶೈಲಿ. ನನ್ನದು ಹಿಡಿದ ಕೆಲಸ ಮುಗಿಸಿ, ತಕ್ಷಣವೇ ಮತ್ತೊಂದನ್ನು ತೆರೆದಿಟ್ಟುಕೊಂಡು ಕೂರುವ ಹೊತ್ತುಗತ್ತು ಇಲ್ಲದ ಅಭಿರುಚಿ. ಅಗಾಧ ವ್ಯತ್ಯಯಗಳಲ್ಲೂ ನನ್ನನ್ನು ಹುಚ್ಚನಂತೆ ಪ್ರೀತಿಸುತ...